ನನ್ನ ಬಗ್ಗೆ

ನನ್ನ ಫೋಟೋ

ನಿವೃತ್ತ ತಹಸೀಲ್ದಾರ್, ಕೆಳದಿ ಕವಿಮನೆತನದ ಪತ್ರಿಕೆ 'ಕವಿಕಿರಣ'ದ ಸಂಪಾದಕ.
ನನ್ನ ಕೃತಿಗಳು: 1.ಕವಿಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿ ಚಿತ್ರಣ), 2. ಮೂಢ ಉವಾಚ - ಮುಕ್ತಕಗಳು, 3. ಆದರ್ಶದ ಬೆನ್ನು ಹತ್ತಿ . .
ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಭಾನುವಾರ, ಮಾರ್ಚ್ 7, 2010

ಮೂಢನ ಕಥೆಗಳು - 1


                                                                          ಜಗಳ
     ಸಮಯವಿದ್ದುದರಿಂದ ಮೂಢ ತನ್ನ ಗೆಳೆಯ ಮಂಕನನ್ನು ಮಾತನಾಡಿಸಿಕೊಂಡು ಬರಲು ಆತನ ಮನೆಗೆ ಹೋದ. ಆ ಸಮಯದಲ್ಲಿ ಮಂಕ ಮತ್ತು ಅವನ ಪತ್ನಿಯ ನಡುವೆ ಯಾವುದೋ ವಿಷಯಕ್ಕೆ ಬಿರುಸಿನ ವಾಗ್ವಾದ ನಡೆದಿತ್ತು. ಸಂದರ್ಭ ಸರಿಯಿಲ್ಲವೆಂದು ಮೂಢ ಹಿಂತಿರುಗಿ ಹೋಗಬೇಕೆಂದಿದ್ದಾಗ ಅವನನ್ನು ನೋಡಿದ ಗೆಳೆಯ 'ಏಯ್, ಬಾರೋ' ಎಂದು ನಗುತ್ತಾ ಆಹ್ವಾನಿಸಿದ. 'ಊರಗಲ ಬಾಯಿ ಮಾಡಿಕೊಂಡು ಮಾತಾಡಿಸೋದು ನೋಡು'ಎಂದು ಮೂದಲಿಸಿದ ಪತ್ನಿ ಮೂಢನಿಗೆ 'ನೋಡಣ್ಣಾ, ಇವರು ಊರಿನವರೊಂದಿಗೆಲ್ಲಾ ನಗುನಗುತ್ತಾ ಮಾತನಾಡುತ್ತಾರೆ. ನನ್ನ ಹತ್ತಿರ ಮುಖ ಗಂಟಿಕ್ಕಿಕೊಂಡು ಮಾತಾಡುತ್ತಾರೆ' ಎಂದು ದೂರಿದಳು. ಮೂಢ ಸುಮ್ಮನಿರಲಾರದೆ 'ಊರಿನವರು ನಗುತ್ತಾ ಮಾತಾಡಿಸಿದಾಗ ಇವನು ಸಿಟ್ಟು ಮಾಡಿಕೊಂಡು ಮಾತಾಡಲು ಆಗುತ್ತೇನಮ್ಮಾ? ನೀನೂ ನಗುತ್ತಾ ಮಾತಾಡಿಸು. ಆಗ ನೋಡು. ಮುಖ ಗಂಟಿಕ್ಕುವುದಿರಲಿ, ಮುಡಿಯಲು ಮಾರುದ್ದಾ ಮಲ್ಲಿಗೆ ಹೂವು ತರುತ್ತಾನೆ' ಎಂದ. ಮಂಕನ ಪತ್ನಿ 'ಅದಕ್ಕೇ ನಿಮ್ಮನ್ನು ಎಲ್ಲರೂ ಮೂಢ ಅನ್ನುವುದು' ಎಂದು ಹೇಳಿ ಒಳಗೆ ಹೋದರೂ ಅವಳ ಒಳಮನಸ್ಸು 'ಅದೂ ನಿಜ' ಎಂದು ಹೇಳುತ್ತಿತ್ತು. ಗೆಳೆಯರು ಮಾತನಾಡುತ್ತಿದ್ದಾಗ ಮಂಕನಿಗೆ ಇಷ್ಟವಾದ ತಿಂಡಿಯ ಜೊತೆಗೆ ಕಾಫಿ ಇಬ್ಬರಿಗೂ ಬಂದಿತು. ಪತಿ ಪತ್ನಿಯರ ನಡುವೆ ಕಣ್ಣುಗಳು ಮಾತಾಡಿದವು. ತಿಂಡಿಯ ರುಚಿ ಹೆಚ್ಚಾಯಿತು.
- ಕ.ವೆಂ.ನಾಗರಾಜ್.

4 ಕಾಮೆಂಟ್‌ಗಳು:

 1. ಸಂಪದಿಗರ ಪ್ರತಿಕ್ರಿಯೆ

  http://sampada.net/blog/kavinagaraj/17/06/2010/26140

  ಪ್ರತ್ಯುತ್ತರಅಳಿಸಿ
 2. ಅತ್ಯುತ್ತಮ ಕಥೆ. ಪ್ರಸ್ತುತ ಪಡಿಸಿದ ಶೈಲಿ ಉತ್ತಮವಾಗಿದೆ. ಸಣ್ಣ ಕಾರಣಗಳಿಂದ ಎಷ್ಟೋ ಸಂಸಾರಗಳು ಒಡೆದು ಹೋಗುತ್ತಿರುವ ಇಂದಿನ ಕಾಲ ಘಟ್ಟದಲ್ಲಿ, ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆಯನ್ನು ಹೇಗೆ ಮಾಡಿಕೊಳ್ಳಬಹುದು ಎಂಬುದನ್ನು ಈ ಕಥೆ ತಿಳಿಸುತ್ತದೆ. ವಂದನೆಗಳು.

  ಪ್ರತ್ಯುತ್ತರಅಳಿಸಿ
 3. ವಸಂತ್ ಆರ್
  17JUN2010 10:18
  ಚೆನ್ನಾಗಿದೆ ಉತ್ತಮ ಬರಹ ಧನ್ಯವಾದಗಳು.
  ವಸಂತ್

  ಪ್ರತ್ಯುತ್ತರಅಳಿಸಿ