ನನ್ನ ಬಗ್ಗೆ

ನನ್ನ ಫೋಟೋ

ನಿವೃತ್ತ ತಹಸೀಲ್ದಾರ್, ಕೆಳದಿ ಕವಿಮನೆತನದ ಪತ್ರಿಕೆ 'ಕವಿಕಿರಣ'ದ ಸಂಪಾದಕ.
ನನ್ನ ಕೃತಿಗಳು: 1.ಕವಿಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿ ಚಿತ್ರಣ), 2. ಮೂಢ ಉವಾಚ - ಮುಕ್ತಕಗಳು, 3. ಆದರ್ಶದ ಬೆನ್ನು ಹತ್ತಿ . .
ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಡಿಸೆಂಬರ್ 13, 2010

ಮೂಢ ಉವಾಚ -36 : ದೇವ

ದುಷ್ಟಶಿಕ್ಷಕ ಶಿಷ್ಟರಕ್ಷಕ ದೇವನವನೊಬ್ಬನೆ
ಶಕ್ತರಲಿ ಶಕ್ತ ಬಲ್ಲಿದರ ಬಲ್ಲಿದನವನೊಬ್ಬನೆ|
ಮುನಿಗಳಿಗೆ ಮುನಿ ಕವಿಗಳಿಗೆ ಕವಿಯವನ|
ಸರ್ವೋತ್ತಮರಲಿರುವವನವನೆ ಮೂಢ||


ರವಿಯ ಬೆಳಕು ಚಂದ್ರಕಾಂತಿ ಸುಡುವಗ್ನಿ
ನಿಲ್ವನೆಲ ಹರಿವ ಜಲ ಜೀವರಕ್ಷಕ ಗಾಳಿ|
ಅಚ್ಚರಿಯ ಆಕಾಶಗಳೆಲ್ಲದರ ಕಾರಕನು
ಪ್ರೇರಕನು ಅವನಲ್ಲವೇನು ಮೂಢ||


ತಾಯಿಯು ಅವನೆ ತಂದೆಯು ಅವನ|
ಬಂಧುವು ಅವನೆ ಬಳಗವು ಅವನೆ|
ವಿದ್ಯೆಯು ಅವನೆ ಸಕಲಸಿರಿಯವನೆ
ಸಕಲ ಸರ್ವವವನಲ್ಲದಿನ್ಯಾರು ಮೂಢ||


ಪುಲ್ಲಿಂಗಿಯಲ್ಲ ಸ್ತ್ರೀಲಿಂಗಿಯಲ್ಲ ನಿರ್ಲಿಂಗಿಯಲ್ಲ
ಪುಲ್ಲಿಂಗಿಯೂ ಹೌದು ಸ್ತ್ರೀಲಿಂಗಿಯೂ ಹೌದು|
ನಿರ್ಲಿಂಗಿಯೂ ಹೌದು ಏನಲ್ಲ ಏನಹುದು
ಎಲ್ಲವೂ ಅವನೆ ಅವನು ಅವನೆ ಮೂಢ||
****************
-ಕವಿನಾಗರಾಜ್.

2 ಕಾಮೆಂಟ್‌ಗಳು:

  1. ದೇವರು ಇದ್ದಾನೋ ಇಲ್ಲವೋ ಎನ್ನುವ ಅನುಮಾನ ಕಾಡುವ 'ಶೋಷಿತ' ರಿಗೆ ಇಲ್ಲಿದೆ ಉತ್ತರ.
    ಯಾವುದೋ ಪೂರ್ವ ಪ್ರಾರಬ್ಧ ಕರ್ಮ ಫಲಕ್ಕೆ ಈಗ ನೋವಿನಗಾಧ ಅನುಭವಿಸುತ್ತಿರುವ ನನ್ನಂತಹ ಮೂಢರಿಗೆ ನಿಮ್ಮ ಧಯೆಯಿಂದ ಸಾಕ್ಷಾತ್ಕಾರವಾಗಲಿ.

    ಪ್ರತ್ಯುತ್ತರಅಳಿಸಿ