ದೂಷಿಸದಿರು ಮನವೆ ಪರರು ಕಾರಣರಲ್ಲ
ನಿನ್ನೆಣಿಕೆ ತಪ್ಪಾಗಿ ಕಂಡಿರುವೆ ನೋವ |
ವಿಧಿಯು ಕಾರಣವಲ್ಲ ಹಣೆಬರಹ ಮೊದಲಲ್ಲ
ಕೊರಗಿದರೆ ಫಲವಿಲ್ಲ ದಣಿಯದಿರು ಮನವೆ ||
ಉಗ್ರವಾಗಿಹ ಮನವೆ ತಾಳು ತಾಳೆಲೆ ನೀನು
ವಿವೇಕ ನಲುಗೀತು ಕೆರಳದಿರು ತಾಳು |
ವ್ಯಗ್ರತೆಯ ನಿಗ್ರಹಿಸಿ ಸಮಚಿತ್ತದಲಿ ನಡೆಯೆ
ಸೋಲಿನ ಅನುಭವವೆ ಗೆಲುವಿಗಾಸರೆಯು ||
ಮೂಢನಂತಾಡದಿರು ಮತಿಗೆಟ್ಟು ನರಳದಿರು
ಮೈ ಕೊಡವಿ ಮೇಲೆದ್ದು ಅಡಿಯನಿಡು ಧೀರ |
ಸೋಲದಿರೆಲೆ ಜೀವ ಕಾಯ್ವ ನಮ್ಮನು ದೇವ
ಛಲಬಿಡದೆ ಮುನ್ನಡೆದು ಉಳಿಸು ಸ್ವಂತಿಕೆಯ ||
ಲೋಕದೊಪ್ಪಿಗೆ ಬೇಕೆ ಪರರ ಮನ್ನಣೆಯೇಕೆ
ದಾರಿ ಸರಿಯಿರುವಾಗ ಅಳುಕು ಅಂಜಿಕೆಯೇಕೆ |
ಒಳಮನವು ಒಪ್ಪಿರಲು ಚಂಚಲತೆ ಇನ್ನೇಕೆ
ಪಯಣಿಗನೆ ನೀ ಸಾಗು ದಾರಿ ನಿಚ್ಛಳವಿರಲು ||
***************
-ಕ.ವೆಂ.ನಾಗರಾಜ್.
ನಿನ್ನೆಣಿಕೆ ತಪ್ಪಾಗಿ ಕಂಡಿರುವೆ ನೋವ |
ವಿಧಿಯು ಕಾರಣವಲ್ಲ ಹಣೆಬರಹ ಮೊದಲಲ್ಲ
ಕೊರಗಿದರೆ ಫಲವಿಲ್ಲ ದಣಿಯದಿರು ಮನವೆ ||
ಉಗ್ರವಾಗಿಹ ಮನವೆ ತಾಳು ತಾಳೆಲೆ ನೀನು
ವಿವೇಕ ನಲುಗೀತು ಕೆರಳದಿರು ತಾಳು |
ವ್ಯಗ್ರತೆಯ ನಿಗ್ರಹಿಸಿ ಸಮಚಿತ್ತದಲಿ ನಡೆಯೆ
ಸೋಲಿನ ಅನುಭವವೆ ಗೆಲುವಿಗಾಸರೆಯು ||
ಮೂಢನಂತಾಡದಿರು ಮತಿಗೆಟ್ಟು ನರಳದಿರು
ಮೈ ಕೊಡವಿ ಮೇಲೆದ್ದು ಅಡಿಯನಿಡು ಧೀರ |
ಸೋಲದಿರೆಲೆ ಜೀವ ಕಾಯ್ವ ನಮ್ಮನು ದೇವ
ಛಲಬಿಡದೆ ಮುನ್ನಡೆದು ಉಳಿಸು ಸ್ವಂತಿಕೆಯ ||
ಲೋಕದೊಪ್ಪಿಗೆ ಬೇಕೆ ಪರರ ಮನ್ನಣೆಯೇಕೆ
ದಾರಿ ಸರಿಯಿರುವಾಗ ಅಳುಕು ಅಂಜಿಕೆಯೇಕೆ |
ಒಳಮನವು ಒಪ್ಪಿರಲು ಚಂಚಲತೆ ಇನ್ನೇಕೆ
ಪಯಣಿಗನೆ ನೀ ಸಾಗು ದಾರಿ ನಿಚ್ಛಳವಿರಲು ||
***************
-ಕ.ವೆಂ.ನಾಗರಾಜ್.
[ದಾರಿ ಸರಿಯಿರುವಾಗ ಅಳುಕು ಅಂಜಿಕೆಯೇಕೆ]
ಪ್ರತ್ಯುತ್ತರಅಳಿಸಿಸತ್ಯವಾದ ಮಾತು
:-)
ಪ್ರತ್ಯುತ್ತರಅಳಿಸಿಕಾಶೀನಾಥ ತಾವಸ್ಕರ and Prathibha Rai like this.
ಪ್ರತ್ಯುತ್ತರಅಳಿಸಿPrathibha Rai
Nimma anubava namage....DAREEDEEPA
Lakshmi Varanasi
ಅಳಿಸಿಚೆನ್ನಾಗಿದೆ
ಅರುಣ್ ಕುಮಾರ್ ಹೆಚ್ ಎಸ್
ವಿವೇಕ ನಲುಗೀತು ಕೆರಳದಿರು ತಾಳು nice
ಮನೋ ನಿಗ್ರಹದಿಂದ ಅನಾಹುತಗಳ ಜೊತೆಗೆ, ಮಾನಸಿಕ ಹಿಂಸೆಯನೂ ನಿವಾರಿಸಿಕೊಳ್ಳಬಹುದೆಂದು ಇಲ್ಲಿಂದ ಕಲಿತೆ.
ಪ್ರತ್ಯುತ್ತರಅಳಿಸಿಧನ್ಯವಾದ, ಬದರೀನಾಥರೇ.
ಅಳಿಸಿ