ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಫೆಬ್ರವರಿ 21, 2011

ಸೋಲದಿರು

ದೂಷಿಸದಿರು ಮನವೆ ಪರರು ಕಾರಣರಲ್ಲ
ನಿನ್ನೆಣಿಕೆ ತಪ್ಪಾಗಿ ಕಂಡಿರುವೆ ನೋವ |
ವಿಧಿಯು ಕಾರಣವಲ್ಲ ಹಣೆಬರಹ ಮೊದಲಲ್ಲ
ಕೊರಗಿದರೆ ಫಲವಿಲ್ಲ ದಣಿಯದಿರು ಮನವೆ ||


ಉಗ್ರವಾಗಿಹ ಮನವೆ ತಾಳು ತಾಳೆಲೆ ನೀನು
ವಿವೇಕ ನಲುಗೀತು ಕೆರಳದಿರು ತಾಳು |
ವ್ಯಗ್ರತೆಯ ನಿಗ್ರಹಿಸಿ ಸಮಚಿತ್ತದಲಿ ನಡೆಯೆ
ಸೋಲಿನ ಅನುಭವವೆ ಗೆಲುವಿಗಾಸರೆಯು ||


ಮೂಢನಂತಾಡದಿರು ಮತಿಗೆಟ್ಟು ನರಳದಿರು
ಮೈ ಕೊಡವಿ ಮೇಲೆದ್ದು ಅಡಿಯನಿಡು ಧೀರ |
ಸೋಲದಿರೆಲೆ ಜೀವ ಕಾಯ್ವ ನಮ್ಮನು ದೇವ
ಛಲಬಿಡದೆ ಮುನ್ನಡೆದು ಉಳಿಸು ಸ್ವಂತಿಕೆಯ ||


ಲೋಕದೊಪ್ಪಿಗೆ ಬೇಕೆ ಪರರ ಮನ್ನಣೆಯೇಕೆ
ದಾರಿ ಸರಿಯಿರುವಾಗ ಅಳುಕು ಅಂಜಿಕೆಯೇಕೆ |
ಒಳಮನವು ಒಪ್ಪಿರಲು ಚಂಚಲತೆ ಇನ್ನೇಕೆ
ಪಯಣಿಗನೆ ನೀ ಸಾಗು ದಾರಿ ನಿಚ್ಛಳವಿರಲು ||
***************
-ಕ.ವೆಂ.ನಾಗರಾಜ್.



6 ಕಾಮೆಂಟ್‌ಗಳು:

  1. [ದಾರಿ ಸರಿಯಿರುವಾಗ ಅಳುಕು ಅಂಜಿಕೆಯೇಕೆ]
    ಸತ್ಯವಾದ ಮಾತು

    ಪ್ರತ್ಯುತ್ತರಅಳಿಸಿ
  2. ಕಾಶೀನಾಥ ತಾವಸ್ಕರ and Prathibha Rai like this.

    Prathibha Rai
    Nimma anubava namage....DAREEDEEPA

    ಪ್ರತ್ಯುತ್ತರಅಳಿಸಿ
    ಪ್ರತ್ಯುತ್ತರಗಳು
    1. Lakshmi Varanasi
      ಚೆನ್ನಾಗಿದೆ
      ಅರುಣ್ ಕುಮಾರ್ ಹೆಚ್ ಎಸ್
      ವಿವೇಕ ನಲುಗೀತು ಕೆರಳದಿರು ತಾಳು nice

      ಅಳಿಸಿ
  3. ಮನೋ ನಿಗ್ರಹದಿಂದ ಅನಾಹುತಗಳ ಜೊತೆಗೆ, ಮಾನಸಿಕ ಹಿಂಸೆಯನೂ ನಿವಾರಿಸಿಕೊಳ್ಳಬಹುದೆಂದು ಇಲ್ಲಿಂದ ಕಲಿತೆ.

    ಪ್ರತ್ಯುತ್ತರಅಳಿಸಿ