ನನ್ನ ಬಗ್ಗೆ

ನನ್ನ ಫೋಟೋ

ನಿವೃತ್ತ ತಹಸೀಲ್ದಾರ್, ಕೆಳದಿ ಕವಿಮನೆತನದ ಪತ್ರಿಕೆ 'ಕವಿಕಿರಣ'ದ ಸಂಪಾದಕ.
ನನ್ನ ಕೃತಿಗಳು: 1.ಕವಿಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿ ಚಿತ್ರಣ), 2. ಮೂಢ ಉವಾಚ - ಮುಕ್ತಕಗಳು, 3. ಆದರ್ಶದ ಬೆನ್ನು ಹತ್ತಿ . .
ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಫೆಬ್ರವರಿ 22, 2011

ಒಲವಿನ ಒರತೆ ಬತ್ತದಿರಲಿ

ನೋವಿನಲ್ಲಿ ನಲಿವು
     ದುಃಖದಲ್ಲಿದ್ದಾಗ, ಕಷ್ಟದಲ್ಲಿದ್ದಾಗ ಸ್ಪಂದಿಸುವವರನ್ನು ನೆನೆಸಿಕೊಳ್ಳಬೇಕು. ಸುಖವಾಗಿದ್ದಾಗ, ಸಮೃದ್ಧಿಯಾಗಿದ್ದಾಗ ಜೊತೆಗಿದ್ದವರೆಲ್ಲಾ ನಮ್ಮ ಕಷ್ಟಕ್ಕೆ, ದುಃಖಕ್ಕೆ ಸ್ಪಂದಿಸುತ್ತಾರೆಂದು ಹೇಳುವಂತಿಲ್ಲ. ಪ್ರತಿಯೊಬ್ಬರಲ್ಲೂ ಒಳ್ಳೆಯ, ಕೆಟ್ಟ ಗುಣಗಳು ಇರುತ್ತವೆ. ಒಳ್ಳೆಯ ಗುಣಗಳು ಹೊರಹೊಮ್ಮಿದಾಗ ಮಾತ್ರ ಅವರು ನಮಗೆ ಪ್ರಿಯರಾಗುತ್ತಾರೆ.  ಎರಡು ಘಟನೆಗಳು ನನಗೆ ನೆನಪಿಗೆ ಬರುತ್ತಲೇ ಇರುತ್ತವೆ.
ಘಟನೆ -೧: 
ಚಿಂತಿಸಬೇಡಿ, ನಾನು ನಿಮ್ಮೊಂದಿಗಿದ್ದೇನೆ!
     ಅಂದು ನನ್ನ ಮನಸ್ಸಿಗೆ ನೋವಾಗುವಂತಹ ಘಟನೆ ನಡೆದಿತ್ತು. ಅದನ್ನು ತಪ್ಪಿಸಲಾಗಲೀ, ತಡೆಯಲಾಗಲೀ ನನಗೆ ಆಗಿರಲಿಲ್ಲ. ನನ್ನ ಕೈಮೀರಿದ ವಿಷಯವಾಗಿದ್ದರೂ ವೈಯಕ್ತಿಕವಾಗಿ ನನ್ನ ತಪ್ಪಿಲ್ಲದಿದ್ದರೂ ಅಂತಹ ಪ್ರಸಂಗಕ್ಕೆ ನಾನು ಹೊಣೆ ಹೊರಬೇಕಿತ್ತು. ದೂಷಿಸಲು ಯಾರಾದರೂ ಬೇಕಿತ್ತು. ಅದು ನಾನೇ ಅಗುವ ಎಲ್ಲಾ ಸಂಭವವೂ ಇತ್ತು. ನನಗೆ ತಡೆಯಲಾಗದಷ್ಟು ದುಃಖವಾಗಿತ್ತು. ಯಾರಿಗೂ ಕಾಣದಂತೆ ಹೊರಗೆ ಹೋಗಿ ಗಿಡದ ಮರೆಯಲ್ಲಿ ನಿಂತು ಕಣ್ಣು ಒರೆಸಿಕೊಳ್ಳುತ್ತಿದ್ದೆ. ನನ್ನ ತಮ್ಮನ ಮಗ ಅದನ್ನು ಗಮನಿಸಿ (ಬಹುಷಃ ಆತ ನನ್ನನ್ನು ಮೊದಲಿನಿಂದ ಗಮನಿಸುತ್ತಿದ್ದಿರಬೇಕು) "ದೊಡ್ಡಪ್ಪ, ಬನ್ನಿ, ಕರೆಯುತ್ತಿದ್ದಾರೆ"ಎಂದು ಕರೆದ. ಯಾರೂ ನನ್ನನ್ನು ಕರೆದಿರಲಿಲ್ಲ. ಅವನು ಅಂದು ಸಾಯಂಕಾಲ ನನ್ನನ್ನು ಕಾರಿನಲ್ಲಿ ಬಸ್ ನಿಲ್ದಾಣಕ್ಕೆ ಬಿಡಲು ಬಂದವನು ನಾನು ಮೌನವಾಗಿದ್ದುದನ್ನು ಗಮನಿಸಿ ನನ್ನ ತೊಡೆಯ ಮೇಲೆ ಕೈಯಿಟ್ಟು "ದೊಡ್ಡಪ್ಪ, ಚಿಂತೆ ಮಾಡಬೇಡಿ, ನಾನು ನಿಮ್ಮೊಂದಿಗಿದ್ದೇನೆ" ಎಂದು ಹೇಳಿದ್ದು ಅವನ ಹೃದಯದಿಂದ ಬಂದ ಮಾತಾಗಿತ್ತು. ಬಿರುಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಗಂಟಲು ಒಣಗಿದ್ದವನಿಗೆ ಶೀತಲ ತಂಗಾಳಿ ಸೋಕಿದ ಅನುಭವವಾಗಿತ್ತು. ಕಣ್ಣಂಚಿನಿಂದ ಜಿನುಗಿದ ನೀರು ಒರೆಸಿಕೊಂಡೆ.
ಘಟನೆ -೨:
ಸಮಾಧಾನ ಮಾಡಿಕೋ, ತಾತ!

     ಬೆಂಗಳೂರಿನಲ್ಲಿ ಎಲ್.ಕೆ.ಜಿ.ಯಲ್ಲಿ ಓದುತ್ತಿರುವ ನಾಲ್ಕು ವರ್ಷದ ನನ್ನ ಮೊಮ್ಮಗಳು ಅಕ್ಷಯಳಿಗೆ ದಸರಾ ರಜ ಬಂದಾಗ ಕೆಲವು ದಿನ ನಮ್ಮೊಡನೆ ಇರಲಿ ಎಂದು ಹಾಸನಕ್ಕೆ ಕರೆದುಕೊಂಡು ಬಂದಿದ್ದೆ. ಅವಳಿಗೂ ಖುಷಿಯಾಗಿತ್ತು. ದಿನ ಕಳೆದಿದ್ದೇ ಗೊತ್ತಾಗುತ್ತಿರಲಿಲ್ಲ. ದಿನವೆಲ್ಲಾ ಅವಳೊಂದಿಗೆ ಆಡಬೇಕು, ರಾತ್ರಿ ಮಲಗುವ ಮುನ್ನ ೩-೪ ಕಥೆಗಳನ್ನಾದರೂ ಹೇಳಬೇಕು, ಆನಂತರವೇ ಅವಳು ಮಲಗುತ್ತಿದ್ದುದು. ನನಗೆ ಆಗಾಗ್ಗೆ ಮಧ್ಯರಾತ್ರಿಯಲ್ಲಿ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಗಂಟಲಿನ ಹತ್ತಿರ ತಡೆಯುಂಟಾಗಿ ಉಸಿರನ್ನು ಒಳಕ್ಕೆ ಎಳೆದುಕೊಳ್ಳುವುದು, ಬಿಡುವುದಕ್ಕೆ ಹರಸಾಹಸ ಪಡಬೇಕಾಗುತ್ತಿತ್ತು. ಹೀಗಾದಾಗ ಧಡಕ್ಕನೆ ಎಚ್ಚರವಾಗಿ ಪರದಾಡಿಬಿಡುತ್ತಿದ್ದೆ. ಗಡಬಡಿಸಿ ಓಡಾಡುವುದು, ಹಾಗೂ ಹೀಗೂ ಸ್ವಲ್ಪ ಗಾಳಿ ಒಳಕ್ಕೆ ಹೋದಾಗ ಸುಧಾರಿಸಿಕೊಂಡು ನೀರು ಕುಡಿಯುವುದು, ಮೈಮೇಲಿನ ಷರ್ಟು, ಬನಿಯನ್‌ಗಳನ್ನು ಕಳಚಿ ಹಾಕಿ, ಎದೆ, ಗಂಟಲುಗಳಿಗೆ ವಿಕ್ಸ್ ಹಚ್ಚಿಕೊಂಡು ಹತ್ತು ನಿಮಿಷ ಜೋರಾಗಿ ಫ್ಯಾನು ಹಾಕಿಕೊಂಡು ಓಡಾಡಿದ ನಂತರ ಸಮಾಧಾನವಾಗಿ ಮಲಗಲು ಸಾಧ್ಯವಾಗುತ್ತಿತ್ತು. ಒರಗು ದಿಂಬು ಇಟ್ಟುಕೊಂಡು ಒರಗಿ ಕುಳಿತುಕೊಂಡ ಸ್ಥಿತಿಯಲ್ಲಿ ಮಲಗುತ್ತಿದ್ದೆ. ಒಂದು ದಿನ ನನ್ನ ಅಂತ್ಯ ಹೀಗೇ ಆಗುತ್ತದೆಯೇನೋ ಎಂದು ಎಷ್ಟೋ ಸಲ ನನಗೆ ಅನ್ನಿಸುತ್ತಿತ್ತು, ಮೊಮ್ಮಗಳು ಬಂದು ನಾಲ್ಕು ದಿನವಾಗಿತ್ತು. ಅಂದು ರಾತ್ರಿ ಕಥೆ ಕೇಳಿ ಅವಳು ಮಲಗಿದಾಗ ರಾತ್ರಿ ಹನ್ನೊಂದು ಹೊಡೆದಿತ್ತು. ರಾತ್ರಿ ಸುಮಾರು ೧೨-೩೦ರ ಹೊತ್ತಿಗೆ ನನಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಧಡಕ್ಕನೆ ಎದ್ದ ರಭಸಕ್ಕೆ ನನ್ನ ಪಕ್ಕ ಮಲಗಿದ್ದ ಮೊಮ್ಮಗಳಿಗೂ ಎಚ್ಚರವಾಯಿತು. ನನ್ನ ಪತ್ನಿ ಮೊಮ್ಮಗಳ ಆಟ, ಊಟಗಳ ಜೊತೆಗೆ ಹಬ್ಬದ ಕೆಲಸ, ಮನೆಕೆಲಸ ಕಾರ್ಯಗಳನ್ನೂ ಮಾಡಿ ಸುಸ್ತಾಗಿ ಮಲಗಿದ್ದು ಅವಳಿಗೆ ಎಚ್ಚರವಾಗಲಿಲ್ಲ. ಮೊಮ್ಮಗಳು ಎದ್ದು ಕುಳಿತು "ಏನಾಯಿತು, ತಾತ, ಸಮಾಧಾನ ಮಾಡಿಕೋ ತಾತ, ನೀರು ಕೊಡಲಾ, ಹಾಲು ಕುಡೀತೀಯಾ" ಎಂದು ವಿಚಾರಿಸಿದಾಗ ನನಗೆ ಹೃದಯ ತುಂಬಿ ಬಂತು. ಎದ್ದಿದ್ದ ರಭಸಕ್ಕೆ ನನಗೆ ಸ್ವಲ್ಪ ಉಸಿರಾಡಲು ಅನುಕೂಲವಾಯಿತು. ಇಟ್ಟುಕೊಂಡಿದ್ದ ನೀರು ಕುಡಿದೆ. ಮೊಮ್ಮಗಳು ನನ್ನ ಎದೆ, ಬೆನ್ನು ಸವರುತ್ತಿದ್ದಳು. ಅವಳನ್ನು ಬಾಚಿ ತಬ್ಬಿಕೊಂಡೆ. ಅವಳೂ ನನ್ನ ತಲೆ ಸವರಿ ನನ್ನ ಕೆನ್ನೆಗೆ ಮುತ್ತು ಕೊಟ್ಟಾಗ ನಾನು ನಿಜಕ್ಕೂ ಧನ್ಯನಾಗಿದ್ದೆ. ನನಗೆ ಸಮಾಧಾನವಾಗಿತ್ತು. ನಾನು ದಿಂಬಿಗೆ ಒರಗಿದಂತೆ ಮಲಗಿದಾಗ ಅವಳೂ ನನ್ನನ್ನು ಒರಗಿಕೊಂಡೇ ನಿದ್ದೆ ಮಾಡಿದ್ದಳು. ಏನೂ ಅರಿಯದ ನಾಲ್ಕು ವರ್ಷದ ಪುಟಾಣಿ ತೋರಿದ ಮಮತೆಯನ್ನು ನಾನು ಹೇಗೆ ಮರೆಯಲಿ?
-ಕ.ವೆಂ.ನಾಗರಾಜ್.

6 ಕಾಮೆಂಟ್‌ಗಳು:

 1. ಮನಕರಗುವಂತ ಘಟನೆಗಳು.
  ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು.

  ಪ್ರತ್ಯುತ್ತರಅಳಿಸಿ
 2. ಓದಿ ಪ್ರತಿಕ್ರಿಯಿಸಿದ್ದಕ್ಕೆ ವಂದನೆ, ಶ್ರೀಧರ್.

  ಪ್ರತ್ಯುತ್ತರಅಳಿಸಿ
 3. Lakshmi Varanasi
  ಮಕ್ಕಳು ದೇವರಂತೆ ಆಪ್ತರು !
  Chandan Kadur, Bindu Nagaraj and 3 others like this.

  Narayan Swamy ·[ Friends with Bindu Nagaraj]
  Nijavagiyu neevu dhanyaru. hrudayasparshiya ghatane annu odi nanage tumba santoshavayitu.... Akshaya ninage olleyadaagali.....

  ಪ್ರತ್ಯುತ್ತರಅಳಿಸಿ
 4. Chandan Kadur, Bindu Nagaraj and 3 others like this.

  Narayan Swamy · Friends with Bindu Nagaraj
  Nijavagiyu neevu dhanyaru. hrudayasparshiya ghatane annu odi nanage tumba santoshavayitu.... Akshaya ninage olleyadaagali.....
  Lakshmi Varanasi and 2 others like this.
  Lakshmi Varanasi
  ಮಕ್ಕಳು ದೇವರಂತೆ ಆಪ್ತರು !

  ಪ್ರತ್ಯುತ್ತರಅಳಿಸಿ
  ಪ್ರತ್ಯುತ್ತರಗಳು
  1. 5 people like this.
   Abd Al Qadir Hanglur ಹ್ರದಯ ತಟ್ಟಿದ ಸನ್ನಿವೇಶ .. ಸಂಬಂದ ಅಂದರದು ... ರಕ್ತ ಸಂಬಂದ .. ತಾನಾಗಿಯೇ ಹುಟ್ಟುವ ಸ್ನೇಹ .. ಹುಟ್ಟಿಸಿದಾತ ಹ್ರದಯದಲಿ ತುಂಬಿದ ಒಲವು ..

   ಅಳಿಸಿ
  2. Balakrishna Shetty
   Kavi Nagarajre, ನಿಮ್ಮ ಮೊಮ್ಮಗಳಿಗೆ ಪೂರ ಕುಂದಾಪ್ರದ ಪರವಾಗಿ ಸಿಹಿ ಮುತ್ತುಗಳು. ಅಸಹಾಯಕವಾದ ಮನಕ್ಕೆ ಮುದಕೊಡುವ ಅತ್ಯಂತ ನಿಕಟವಾದ ಪ್ರಪಂಚವೇ ಈ ಪುಟ್ಟಾಣಿಗಳು. ಹಾಗಿರುವಾಗ ಯಂತಹ ಕಠಿಣ ಹ್ರದಯದ ಮಾನವನೂ ಪುಟ್ಟಾಣಿ ಗಳೊಂದಿಗಿರಲು ನಗುಮುಖದೊನ್ದಿಗಿರುತ್ತನೆ.. ಅಲ್ಲವೇ ಸಾರ್?
   October 25 at 1:25am · Like

   Shridhar Poojari
   nam manige hostondu putani bante avattinda nam appa abbige nav irude mart hoyite .20 dina ait phone madi 21 dina ait magu hutti enta madukkat heli????????
   Kavi Nagaraj
   ಧನ್ಯವಾದಗಳು, ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಧರ ಪೂಜಾರಿಯವರಿಗೆ.

   ಅಳಿಸಿ