ಅವನೊಬ್ಬ ಫುಡ್‌ಇನ್ಸ್‌ಪೆಕ್ಟರ್ ಆಗಿದ್ದ. ಸಾಕಷ್ಟು ಕಮಾಯಿ ಬರುವ ಆ ಹುದ್ದೆಯಲ್ಲಿದ್ದರೂ ಅವನೊಬ್ಬ ನೀತಿ ನಿಯತ್ತಿನ ಪ್ರಾಣಿಯಾಗಿದ್ದು ಲಂಚಕ್ಕೆ ಕೈ ಒಡ್ಡುತ್ತಿರಲಿಲ್ಲ. ಹಾಗೆಂದು ಅವನ ಮನೆಯ ಆರ್ಥಿಕ ಪರಿಸ್ಥಿತಿ ಉತ್ತಮವೇನಾಗಿರಲಿಲ್ಲ. ಕೆಳಮಧ್ಯಮ ವರ್ಗಕ್ಕೆ ಸೇರಿಸಬಹುದಾದ ಕುಟುಂಬ ಅವನದು. ಹಾಸಿಗೆ ಇದ್ದಷ್ಟು ಕಾಲು ಚಾಚುವ ಸ್ವಭಾವದ ಅವನಿಗೆ ತಿಂಗಳ ಕೊನೆಯ ಭಾಗದಲ್ಲಿ ಇನ್ನೂ ಸಂಬಳ ಬರಲು ಎಷ್ಟು ದಿನ ಎಂದು ಲೆಕ್ಕ ಹಾಕಬೇಕಾಗುತ್ತಿತ್ತು. ಇಂತಹುದೇ ಒಂದು ದಿನ ಆತ ಒಂದು ಸರ್ಕಾರಿ ನ್ಯಾಯಬೆಲೆ ಅಂಗಡಿ ತಪಾಸಣೆಗೆ ಹೋದ. ಅಂಗಡಿಯ ಮಾಲಿಕನ ಲೆಕ್ಕಪತ್ರಗಳನ್ನು ನೋಡಿ ಹೊರಡುವ ಸಂದರ್ಭದಲ್ಲಿ ಅವನ ಸ್ವಭಾವದ ಅರಿವಿದ್ದ ಮಾಲೀಕ "ದಯವಿಟ್ಟು ತಪ್ಪು ತಿಳಿಯಬೇಡಿ. ಇದು ಲಂಚ ಅಲ್ಲ. ಮನೆಗೆ ಹಣ್ಣು ತೆಗೆದುಕೊಂಡು ಹೋಗಿ ಸ್ವಾಮಿ" ಎಂದು ಐವತ್ತು ರೂಪಾಯಿ ಕೊಡಬಂದಾಗ 'ಬೇಡ' ಎಂದರೂ ಬಲವಂತವಾಗಿ ಆತನ ಜೇಬಿಗೆ ಹಾಕಿದ. ಅವನಿಗೆ ಹಣದ ಅಗತ್ಯವಿತ್ತು. ಮನಸ್ಸು ಡೋಲಾಯಮಾನಸ್ಥಿತಿಯಲ್ಲಿತ್ತು. ಹಾಗಾಗಿ ಸುಮ್ಮನೆ ಹೊರಬಂದ. ಜೇಬಿನಲ್ಲಿ ಹಣವಿದೆ. ಯಾತಕ್ಕಾದರೂ ಉಪಯೋಗಕ್ಕೆ ಆಗುತ್ತದೆ ಎಂದು ಅನ್ನಿಸುತ್ತಿದ್ದರೂ ಅವನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಸರಿಯಾಗಿ ಊಟ ಸೇರಲಿಲ್ಲ. ರಾತ್ರಿ ನಿದ್ದೆಯೂ ಬರಲಿಲ್ಲ. ಬಹಳಷ್ಟು ಯೋಚಿಸಿ ಆ ಹಣ ಹಿಂತಿರುಗಿಸಲು ನಿರ್ಧರಿಸಿದ ಮೇಲಷ್ಟೇ ಅವನಿಗೆ ನಿದ್ದೆ ಬಂದಿದ್ದು. ಬೆಳಿಗ್ಗೆ ಬೇಗ ಎದ್ದು ಸ್ನಾನ, ತಿಂಡಿ ಮುಗಿಸಿ ಹೋದರೆ ಅಂಗಡಿಯ ಬಾಗಿಲು ಇನ್ನೂ ತೆರೆದಿರಲಿಲ್ಲ. ಮಾಲೀಕನಿಗೆ ಕಾಯುತ್ತಾ ಅಂಗಡಿಯ ಕಟ್ಟೆಯ ಮೇಲೆ ಕುಳಿತಿದ್ದ. ಸ್ವಲ್ಪ ಸಮಯದ ನಂತರ ಬಂದ ಮಾಲೀಕನಿಗೆ ಫುಡ್ ಇನ್ಸ್‌ಪೆಕ್ಟರ್ ಅಂಗಡಿಯ ಬಳಿ ಕಾಯುತ್ತಿದ್ದುದನ್ನು ನೋಡಿ ಗಾಬರಿಗೊಂಡ. ಏನೋ ಗ್ರಹಚಾರ ಕಾದಿದೆ ಅಂದುಕೊಂಡವನಿಗೆ ಅವನು ಐವತ್ತು ರೂಪಾಯಿ ಹಿಂತಿರುಗಿಸಿ "ನೀವು ಹಣ ಕೊಟ್ಟಾಗ ನನ್ನ ಮನಸ್ಸು ಚಂಚಲವಾಯಿತು. ಇನ್ನೊಮ್ಮೆ ದಯವಿಟ್ಟು ಈ ರೀತಿ ಮಾಡಬೇಡಿ" ಎಂದು ಹೇಳಿ ವಾಪಸು ನಿರಾಳ ಮನಸ್ಸಿನಲ್ಲಿ ಹಿಂತಿರುಗಿದ. ಅಂಗಡಿಯವನೂ ನಿಟ್ಟುಸಿರು ಬಿಟ್ಟ.
-ಕ.ವೆಂ.ನಾಗರಾಜ್.
[ಚಿತ್ರ ಅಂತರ್ಜಾಲದಿಂದ ಹೆಕ್ಕಿದ್ದು.]
Avinash Dhaded
ಪ್ರತ್ಯುತ್ತರಅಳಿಸಿಇದು ಕಲ್ಪನೆಯಾಗಿರಬಹುದು ಸಾರ್...... ಇಂದಿನ ದಿನಮಾನಗಳಲ್ಲಿ ಇಂತಹ ಸಂಗತಿಗಳು ಪವಾಡವೇ ಸರಿ...!
Sathyanarayana Reddy
inthavaru irutthara hee kaladalli.
Kavi Nagaraj
ಇದು ನನ್ನದೇ ಅನುಭವ, ನಾನು 40 ವರ್ಷಗಳ ಹಿಂದೆ ಹಾಸನದಲ್ಲಿ ಫುಡ್ ಇನ್ಸ್ ಪೆಕ್ಟರ್ ಆಗಿದ್ದಾಗ ನಡೆದ ಸತ್ಯ ಸಂಗತಿ.
Prathibha Rai
ಅಳಿಸಿEgalu obbobbaru eddare antha jana..
Sathyanarayana Reddy
Nimmanthavara avashyakathe beku namma samajakke. Romanchanavagutthe inthaha nija gatanegallnnu keli....beleyali nimmathavara santhathi
Avinash Dhaded
thats great sir
Manjunath Parshurampura Matad
ಅಳಿಸಿಇಂತಹ ತೊಳಲಾಟ ಗಳು ಇಂದು ಕಾಣೆಯಾಗಿವೆ... ;-):-(