



ಹಕ್ಕಿಯೊಂದು ಹಾರಿ ಬಂದು ಕಿಟಕಿಯಲ್ಲಿ ಕುಳಿತಿತು
ಸುತ್ತಮುತ್ತ ಹಾರಿತು ಅತ್ತ ಇತ್ತ ನೋಡಿತು |
ಸರಿಯೆಂದು ಕಂಡಿತು ಗೂಡನೊಂದು ಕಟ್ಟಿತು
ಕಾಲ ಕೂಡಿ ಬಂದಿತು ಮೊಟ್ಟೆ ಮೂರು ಇಟ್ಟಿತು ||




ಹಕ್ಕಿಗಾಗಿ ಕೋಣೆ ತೆರವು ಮನೆಮಂದಿಯಲ್ಲ ನೆರವು
ತಾಯಿಗಿಲ್ಲ ತಲೆಭಾರ ಜೀವಸೆಲೆಗೆ ಉಪಕಾರ |
ಬಿಟ್ಟ ಬಾಣದಂತೆ ಹಾರಿ ಬಂದವರನು ಹೆದರಿಸಿತು
ಕಾವಲಿದ್ದು ಕಾವು ಕೊಟ್ಟು ತಾಯಿತನವ ಮೆರೆಯಿತು||
ಮೊಟ್ಟೆ ಬಿರಿದು ಬೊಮ್ಮಟೆಗಳು ಬಂದವು
ತ್ರಾಣವಿಲ್ಲ ಕಾಣದೆಲ್ಲ ಕಿಚಿಪಿಚಿ ಕದಲಿದವು |
ನಾವು ತಾಳಲಾರೆವು ಅಮ್ಮ ಹಸಿವೆ ಅಮ್ಮ ಹಸಿವೆ
ಬಂದೆ ತಡಿ ಇಗೋ ಹಿಡಿ ಪ್ರೀತಿ ಎಲ್ಲ ಸುರಿವೆ ||
ಹಾ ಸರಿ ಹೀಗೆ ಮರಿ ಎಲ್ಲಿ ಹಾರು ನೋಡುವ
ಹಾರುವುದ ಕಲಿತ ಮೇಲೆ ಭರ್ ಎಂದು ಹಾರುವ|
ನಿಮ್ಮ ನೆರವು ನಮ್ಮ ನಲಿವು ಎನಿತು ಮಧುರ ಸಂಬಂಧ
****************
-ಕ.ವೆಂ. ನಾಗರಾಜ್.
(ಆಧಾರ: ಶಿವಮೊಗ್ಗದ ದಿನಪತ್ರಿಕೆ 'ಜನಹೋರಾಟ'ದಲ್ಲಿ ಪ್ರಕಟವಾದ ಕವಿ ಸುರೇಶರ 'ಒಂದು ಗೂಡಿನ ಕಥೆ' ಎಂಬ ಸಚಿತ್ರ ಲೇಖನ; ಚಿತ್ರಗಳು: ಬಿ.ಎಸ್.ಆರ್. ದೀಪಕ್.)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ