ಕುಟುಂಬದ ಯಾರಾದರೂ ಸದಸ್ಯರು ಅಥವ ಆತ್ಮೀಯರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರೆ ಅವರಿಗಾಗಿ ಕುಟುಂಬದ ಇನ್ನೊಬ್ಬರು (ಗಂಡ/ಹೆಂಡತಿ/ಮಗ/ಮಗಳು/ಸೋದರ/ ಸೋದರಿ/ಸ್ನೇಹಿತ/ಸ್ನೇಹಿತೆ, ಇತ್ಯಾದಿ) ತಮ್ಮ ಕಿಡ್ನಿಯೊಂದನ್ನು ದಾನ ಮಾಡಲು ಮುಂದೆ ಬರುವವರು ಇರಬಹುದು. ಆದರೆ ಪರಿಚಯವೇ ಇಲ್ಲದ, ಇಂತಹ ಸಮಸ್ಯೆ ಇರುವ ಯಾರಾದರೂ ಕಡುಬಡವರಿಗೆ ತಾವು ಬದುಕಿರುವಾಗಲೇ ತಮ್ಮ ಕಿಡ್ನಿಯೊಂದನ್ನು ದಾನ ಮಾಡಲು ಮುಂದೆ ಬಂದವರನ್ನು ಕಂಡಿದ್ದೀರಾ? ಅಂತಹ ಧೀಮಂತ ಮಹಿಳೆಯೊಬ್ಬರು ಇದ್ದಾರೆ, ಅವರೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಶ್ರೀಮತಿ ಶಕುಂತಲಾ ಮಂಜುನಾಥರವರು.
ಪತಿ ಮಂಜುನಾಥ ಮತ್ತು ಮಗ ಪ್ರವೀಣನೊಂದಿಗೆ ಶ್ರೀಮತಿ ಶಕುಂತಲಾ.
ಸಾಣೇನಹಳ್ಳಿ ಶ್ರೀಗಳು ಪಂಡಿತಾರಾಧ್ಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ನೇತ್ರದಾನ ಶಿಬಿರವೊಂದರಲ್ಲಿ ನೇತ್ರದಾನ ಮಾಡಲು ಮುಂದೆ ಬಂದ ಹಲವರು ಆ ಬಗ್ಗೆ ತಮ್ಮ ಒಪ್ಪಿಗೆ ಪತ್ರ ಬರೆದುಕೊಡುತ್ತಿದ್ದರು. ಶ್ರೀಮತಿ ಶಕುಂತಲಾ ಮಂಜುನಾಥರವರು ಬರೆದುಕೊಟ್ಟ ಪತ್ರದಲ್ಲಿದ್ದ ಒಕ್ಕಣೆ:
"ನಾನು ನನ್ನ ಕಣ್ಣುಗಳನ್ನು ದಾನ ಮಾಡುತ್ತೇನೆ. ಇದು ನಾನು ಮೃತಳಾದ ಮೇಲೆ ಆಗುವ ಕಾಯಕ. ಆದರೆ ನಾನು ಜೀವಿತಾವಧಿಯಲ್ಲೇ ಕಡುಬಡವರಿಗೆ ನನ್ನ ಒಂದು ಮೂತ್ರಪಿಂಡ ಕಿಡ್ನಿ ಕೊಡಲು ಬಯಸಿದ್ದೇನೆ. ದಯವಿಟ್ಟು ಇದಕ್ಕೆ ಅವಕಾಶ ಕಲ್ಪಿಸಿಕೊಡಿ."
ಈ ವಿಷಯವನ್ನು ಸಂಬಂಧಿಸಿದ ಸಂಸ್ಥೆ/ಆಸ್ಪತ್ರೆಗೆ ತಿಳಿಸುವ ಬಗ್ಗೆ ಆಕೆಗೆ ಏನೂ ಗೊತ್ತಿರಲಿಲ್ಲ. ಅಲ್ಲದೆ ಬಡವರಿಗೆ ಒದಗುವ ಖರ್ಚು ಹೊಂದಿಸಲು ಅವರಿಗೆ ಆಗದೇ ಇರಬಹುದಾದ್ದರಿಂದ, ಸ್ವಾಮಿಗಳಿಗೆ ಹೇಳಿದರೆ ಅವರು ಸಹಕಾರ ನೀಡಿ ಒಳ್ಳೆಯದಾಗಬಹುದೆಂಬ ಕಾರಣದಿಂದ ಅವರಿಗೆ ಪತ್ರ ಬರೆದುಕೊಟ್ಟಿದ್ದರು. ೫೦ ವರ್ಷದ ಶ್ರೀಮತಿ ಶಕುಂತಲಾ ಮಂಜುನಾಥರವರ ಪತಿ ಮಂಜುನಾಥರವರು ಒಬ್ಬ ಸಾಮಾನ್ಯ ರೈತ, ತೃಪ್ತ ಜೀವನ ನಡೆಸುತ್ತಿರುವವರಾಗಿದ್ದು ಪತ್ನಿಯ ನಿರ್ಧಾರದ ಬಗ್ಗೆ ಅವರ ಸಂಪೂರ್ಣ ಸಮ್ಮತಿ ಇದೆ. ಅವರ ಇಬ್ಬರು ಹೆಣ್ಣುಮಕ್ಕಳ ಮದುವೆ ಆಗಿದೆ. ಒಬ್ಬ ಗಂಡು ಮಗ ಪ್ರವೀಣ ತಾಯಿ ಮಾಡುವುದಾಗಿ ಹೇಳಿರುವ ಕೆಲಸ ಒಳ್ಳೆಯದಾಗಿದ್ದು ತಾನು ಏನೂ ಹೇಳುವುದಿಲ್ಲವೆನ್ನುತ್ತಾನೆ.
ನೊಂದವರಿಗಾಗಿ ಮಿಡಿಯುವ ಹೃದಯವೀಣೆಯ ನಾದ ಎಲ್ಲರಿಗೂ ಕೇಳಲಿ, ಇತರರೂ ಪ್ರೇರಿತರಾಗಲಿ ಎಂಬುದೇ ಈ ಕಿರುಬರಹದ ಉದ್ದೇಶ.
********************
-ಕ.ವೆಂ.ನಾಗರಾಜ್.
(ಆಧಾರ: ವಿಜಯ ಕರ್ನಾಟಕ - ದಿ. ೧೦-೦೭-೨೦೧೧).
ಲೇಖಕರು ಈ ಕಾಮೆಂಟ್ ಅನ್ನು ತೆಗೆದು ಹಾಕಿದ್ದಾರೆ.
ಪ್ರತ್ಯುತ್ತರಅಳಿಸಿಹೊಗಳಲು ಅಕ್ಷರಗಳು ಸಾಲದು.
ಪ್ರತ್ಯುತ್ತರಅಳಿಸಿಮಾದರಿಯಾಗಲಿ ಮಹಾ ತಾಯಿ
ನಮೋ ನಮ:
ಪ್ರತ್ಯುತ್ತರಅಳಿಸಿಪ್ರತಿಕ್ರಿಯಿಸಿದ ಶ್ರೀಧರ್ ಮತ್ತು ಸುರೇಶರಿಗೆ ಧನ್ಯವಾದಗಳು.
ಪ್ರತ್ಯುತ್ತರಅಳಿಸಿ-ನಾಗರಾಜ್.
ಶ್ರೀಮತಿ ಶಕುಂತಲಾ ಅವರ ಬಗ್ಗೆ ಪತ್ರಿಕೆಯಲ್ಲಿ ಓದಿದಾಗಲೇ ಮನಸ್ಸು ತು೦ಬಿಬ೦ದಿತ್ತು. 'ಎಲ್ಲರದ್ದೂ ನನಗೇ ಬೇಕು' ಎನ್ನುವ ಸ್ವಾರ್ಥ ತು೦ಬಿದ ಈ ಜಗತ್ತಿನಲ್ಲಿ ಶ್ರೀಮತಿ ಶಕುಂತಲಾ ಅ೦ಥವರೂ ಇದ್ದಾರೆ ಎನ್ನುವುದೇ ಆಶಾಭಾವನೆಯನ್ನು ಮೂಡಿಸುತ್ತದೆ. ನನಗೂ ನೇತ್ರದಾನ, ದೇಹದಾನ ಮಾಡಬೇಕೆ೦ಬ ಹ೦ಬಲವಿದೆ. ಅದಕ್ಕಾಗಿ ದೇಹವನ್ನು ಹಾಗೂ ಮನಸ್ಸನ್ನು ಸುಸ್ಥಿತಿಯಲ್ಲಿಡುವ ಪ್ರಯತ್ನದಲ್ಲಿದ್ದೇನೆ. ಧನ್ಯವಾದಗಳು ಸರ್. ನನ್ನ ಬ್ಲಾಗ್ ಗೆ ಒಮ್ಮೆ ಬನ್ನಿ.
ಪ್ರತ್ಯುತ್ತರಅಳಿಸಿ