ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಗುರುವಾರ, ನವೆಂಬರ್ 3, 2011

ಜಿಹಾದ್, ಜಿಹಾದ್!

ಆತ್ಮದಾ ಕರೆಯಿದು, ಜಿಹಾದ್ ಜಿಹಾದ್|
ಒಳಗಿನ ಮೊರೆಯಿದು, ಜಿಹಾದ್ ಜಿಹಾದ್|


ವೈರಿಗಳು ಹೊರಗಿಲ್ಲ ಅದೆಲ್ಲ ಬರಿಯ ಸುಳ್ಳು,
ನಿಜವೈರಿ ಒಳಗಿಹನು ಹೊರಗೆಳೆದು ತಳ್ಳು
ಅಂಧಕಾರ ಮೂಡಿಸುವ ಕಾಮ ನಿನ್ನ ವೈರಿ,
ಬುದ್ಧಿಯನ್ನು ದಹಿಸುವ ಕ್ರೋಧ ನಿನ್ನ ವೈರಿ,
ವೈರಿಗಳ ತರಿಯೋಣ ಜಿಹಾದ್ ಜಿಹಾದ್|


ನರರ ತರಿದು ಗೆಲ್ವೆನೆಂದು ಕಾಣದಿರು ಕನಸು
ಕಸುವಿದ್ದರೆ ಒಳಗಿರುವ ವೈರಿಯನ್ನು ಮಣಿಸು
ಮೋಹ ಕೊರಳಿಗುರುಳು ಕುಣಿಕೆಯನ್ನು ಸರಿಸು
ಹರಿಹರಿದು ತಿನ್ನುತಿಹ ಮದವ ಮೆಟ್ಟಿ ಕೊಲ್ಲು
ಕೊಲ್ಲೋಣ ಕೊಲ್ಲೋಣ ಜಿಹಾದ್ ಜಿಹಾದ್!


ಬಾಂಬು ಹಾಕಿ ವಿಷವನಿಕ್ಕಿ ಮಾಡಿದ್ದೇನು ನೀನು
ಮತ್ಸರದ ಕೊರಳನಮುಕಿ ಹಿಡಿಯಬಲ್ಲೆಯೇನು
ಅಡಗಿರುವ ಲೋಭವನ್ನು ಹುಡುಕಬಲ್ಲೆಯೇನು
ವೀರ ಶೂರನಾದರೆ ಹಿಡಿದು ಎಳೆದು ಸಾಯಿಸು
ಮೆಟ್ಟೋಣ ಕುಟ್ಟೋಣ ಜಿಹಾದ್ ಜಿಹಾದ್!
-ಕ.ವೆಂ.ನಾಗರಾಜ್.

2 ಕಾಮೆಂಟ್‌ಗಳು:

  1. ನಿಜ ಸರ್ , ಕೊಲ್ಲ್ಬೇಕಾದುದು ನಮ್ಮೊಳಗಿನ ವ್ಯರಿಗಳನ್ನ... ಮಾಸ್ತರರೊಬ್ಬರು ಬುದ್ಧಿ ಹೇಳಿದಂತಿದೆ ನಿಮ್ಮ ಕವಿತೆ :-) ಅಭಿನಂದನೆಗಳು ಸರ್

    ಪ್ರತ್ಯುತ್ತರಅಳಿಸಿ
  2. :)) ಸವಿ ಪ್ರತಿಕ್ರಿಯೆಗೆ ಧನ್ಯವಾದಗಳು, ಪ್ರತಾಪರೇ.

    ಪ್ರತ್ಯುತ್ತರಅಳಿಸಿ