ಈ ಮಾತು ಹೇಳಿದರೆ ಈ ವಯಸ್ಸಿನಲ್ಲಿ ಇದೇನು ಹೇಳುತ್ತಿದ್ದಾನೆ ಎಂದು ಅನ್ನಿಸಬಹುದು. ನಿಮಗೆ ಹೀಗೆ ಅನ್ನಿಸುವುದು ಸಹಜವೇ ಸರಿ. ಏಕೆಂದರೆ ರಸಿಕತೆ ಎಂದರೆ ವಿಲಾಸಪ್ರಿಯತೆ, ಸರಸವಾಗಿರುವಿಕೆ ಎಂಬ ಅರ್ಥವಿದೆ. ರಸಿಕನೆಂದರೆ ವಿಷಯಲಂಪಟನೆಂದೇ ತಿಳಿಯುವವರು ಹೆಚ್ಚು. ೯೦ ವರ್ಷದ ಮುದುಕ ೧೮ ವರ್ಷದ ಹುಡುಗಿಯನ್ನು ಮದುವೆಯಾಗುವ ಸುದ್ದಿ, ನಿತ್ಯಾನಂದರ ಕುರಿತು ಅಗತ್ಯಕ್ಕಿಂತ ಹೆಚ್ಚು ಅಬ್ಬರದ ಕುಪ್ರಚಾರ, ಅನ್ಶೆತಿಕ ಸಂಬಂಧಗಳ ವರ್ಣರಂಜಿತ, ವೈಭವೀಕರಿಸಿದ ಸುದ್ದಿಗಳು ದೃಷ್ಯಮಾಧ್ಯಮಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುತ್ತಿವೆ. ಕೆಲವು ಸುದ್ದಿಗಳು ಮಾಧ್ಯಮದವರಿಂದಲೇ ಸೃಷ್ಟಿಯಾಗುತ್ತವೆ. ವಿಷಯಲಂಪಟತೆಯನ್ನು ಕೃಷ್ಣಲೀಲೆ ಎನ್ನುವುದು, ವಿಷಯಲಂಪಟರನ್ನು ಕೃಷ್ಣಪರಮಾತ್ಮ ಎಂದು ವ್ಯಂಗ್ಯವಾಗಿ ಹೋಲಿಸುವುದು, ಇತ್ಯಾದಿಗಳು ರಸಿಕತೆ ಪದ ಈಗ ಯಾವ ಅರ್ಥ ಪಡೆದುಕೊಂಡಿದೆಯೆಂಬುದರ ದ್ಯೋತಕ. ಧನಾತ್ಮಕ ವಿಷಯಗಳಿಗೆ ಪ್ರಾಧಾನ್ಯತೆ ಸಿಗದಿರುವುದು, ಕೇವಲ ಋಣಾತ್ಮಕ ಸಂಗತಿಗಳಿಗೆ ಸಿಗಬೇಕಾದಕ್ಕಿಂತ ಹೆಚ್ಚು ಪ್ರಾಧಾನ್ಯತೆ ಕೊಡುತ್ತಿರುವುದರಿಂದ ರಸಿಕತೆಯ ನಿಜವಾದ ಅರ್ಥ ಕಣ್ಮರೆಯಾಗಿದೆಯೇನೋ ಎಂದು ಭಾಸವಾಗುತ್ತಿದೆ.
ರಸವೆಂದರೆ ಸಾರ, ರಸಿಕನೆಂದರೆ ರಸಾಸ್ವಾದ ಮಾಡುವವನು ಎಂದಷ್ಟೇ ಅರ್ಥ. ರಸಿಕತೆಯೆಂದರೆ ಅದರಲ್ಲಿ ನಿಜವಾದ ಸುಖ, ಸಂತೋಷ ಸಿಗುವಂತಿರಬೇಕು. ಇಲ್ಲದಿದ್ದರೆ ಅದು ನ್ಶೆಜ ರಸಿಕತೆಯೆನಿಸಲಾರದು. ಚಾಕೊಲೇಟು, ಪೆಪ್ಪರಮೆಂಟುಗಳನ್ನು ಸವಿಯುವ ಮಕ್ಕಳನ್ನು ಗಮನಿಸಿದ್ದೀರಾ? ಎಲ್ಲಿ ಚಾಕೊಲೇಟು ಬೇಗ ಮುಗಿದು ಹೋಗುವುದೋ ಎಂದು ನಿಧಾನವಾಗಿ ರಸವನ್ನು ಚಪ್ಪರಿಸುತ್ತಾ ಆಗಾಗ್ಗೆ ಅದನ್ನು ಬಾಯಿಂದ ಹೊರತೆಗೆದು ನೋಡಿ ಖುಷಿಪಡುವ ಮಕ್ಕಳನ್ನು ಕೈ, ಬಾಯಿ ಎಲ್ಲವನ್ನೂ ಅಂಟು ಮಾಡಿಕೊಳ್ಳಬೇಡವೆಂದು ದೊಡ್ಡವರು ಗದರಿಸುತ್ತಾರಲ್ಲವೇ? ಆದರೆ, ಅದು ಯಾವುದನ್ನೂ ಲೆಕ್ಕಿಸದ ಮಗು ತನ್ನ ಪಾಡಿಗೆ ತಾನು ರಸಾಸ್ವಾದ ಮಾಡುತ್ತಿರುತ್ತದೆ, ಆನಂದಿಸುತ್ತಿರುತ್ತದೆ. ಅದು ರಸಿಕತೆ! ಎಳೆಯ ಕಂದಮ್ಮಗಳನ್ನು ಆಡಿಸಿದಾಗ ಅವು ಬೊಚ್ಚುಬಾಯಿ ಬಿಟ್ಟು ಕೇಕೆ ಹಾಕಿ ನಗುವುದರಲ್ಲಿ ರಸಿಕತೆಯಿದೆ, ಏಕೆಂದರೆ ಅಲ್ಲಿ ಕೃತಕತೆಯ ಸೋಂಕಿಲ್ಲ. ನಾವೂ ಅಷ್ಟೆ, ರುಚಿರುಚಿಯಾದ ಪದಾರ್ಥಗಳನ್ನು ಗಬಗಬನೆ ತಿನ್ನುವುದಿಲ್ಲ, ಕುಡಿಯುವುದಿಲ್ಲ. ಅದರ ಸವಿಯನ್ನು ಅನುಭವಿಸುತ್ತಾ ಸ್ವಲ್ಪ ಸ್ವಲ್ಪವಾಗಿ ತಿನ್ನುತ್ತೇವಲ್ಲಾ, ಕುಡಿಯುತ್ತೇವಲ್ಲಾ, ಅದರಲ್ಲಿ ರಸಿಕತೆಯಿದೆ. ರಸಿಕರಾಗೋಣ.
ರಸಿಕತೆಯಲ್ಲಿ ತನ್ಮಯತೆಯಿದೆ. ಒಬ್ಬ ಚಿತ್ರಕಾರ, ಒಬ್ಬ ಬರಹಗಾರ ತಮ್ಮ ಕೃತಿಯನ್ನು ಶ್ರದ್ಧೆಯಿಂದ ಪೂರ್ಣಗೊಳಿಸಿದ ನಂತರ ಅದನ್ನು ಮತ್ತೆ ಮತ್ತೆ ನೋಡಿ ಕಣ್ತುಂಬಿಕೊಳ್ಳುತ್ತಾರಲ್ಲಾ, ಆನಂದಿಸುತ್ತಾರಲ್ಲಾ, ಅದು ರಸಿಕತೆ! ಹೊಟ್ಟೆಪಾಡಿಗೆ ಮಾಡುವ ಕೆಲಸದಲ್ಲೂ ಆನಂದ ಕಾಣುವ ರಸಿಕರಿದ್ದಾರೆ. ಅಂತಹ ರಸಿಕರೇ ತಾವು ಮಾಡುವ ಕೆಲಸವನ್ನು ಅಚ್ಚುಕಟ್ಟಾಗಿ, ಚೊಕ್ಕವಾಗಿ ಮಾಡುವವರೆಂದರೆ ಅದರಲ್ಲಿ ಅತಿಶಯೋಕ್ತಿಯಿಲ್ಲ. ರಸಿಕರಾಗೋಣ.
ರಸಿಕತೆಯೆಂದರೆ ಪ್ರೀತಿಸುವುದು, ಅದರಲ್ಲಿ ಪೂರ್ಣ ಸಂತೋಷ ಪಡೆಯುವುದು. ಕಳ್ಳತನದ ಕಾಮದಾಟವನ್ನು ರಸಿಕತೆಯೆನ್ನುವುದಾದರೆ ಅದು ಆ ಪದಕ್ಕೆ ಮಾಡುವ ಅಪಚಾರವೇ ಸರಿ. ಏಕೆಂದರೆ ಅಂತಹ ಕ್ರಿಯೆಯಲ್ಲಿ ಪೂರ್ಣ ಸಂತೋಷ ಸಿಗುವುದೆಂಬುದು ಭ್ರಮೆ. ಅಂತಹ ಕ್ರಿಯೆಯಲ್ಲಿ ಅಳುಕಿದೆ, ಆತಂಕವಿದೆ, ಭಯವಿದೆ. ಇನ್ನು ಆನಂದಕ್ಕೆ ಅರ್ಥವೆಲ್ಲಿ? ಯಾವ ಕ್ರಿಯೆಯಿಂದ ಅಳುಕಿಲ್ಲದ, ಆತಂಕವಿಲ್ಲದ ಆನಂದ ದೊರೆಯುವುದೋ ಅದನ್ನು ಮಾತ್ರ ರಸಿಕತೆಯೆನ್ನಬಹುದು. ನಿಜವಾದ ರಸಿಕ ಬಲವಂತ ಮಾಡಲಾರ. ರಾವಣ ಸಹ ಸಮಾಗಮಕ್ಕಾಗಿ ಸೀತೆಯ ಒಪ್ಪಿಗೆ ಪಡೆಯಲು ಪ್ರಯತ್ನಿಸಿದನೇ ಹೊರತು ಬಲಾತ್ಕಾರ ಮಾಡಲಿಲ್ಲ. ಪ್ರೀತಿಯೆಂದರೆ ಕೇವಲ ಗಂಡು-ಹೆಣ್ಣಿನ ಮಿಲನಕ್ಕೆ ಸೀಮಿತವಾಗಿರದೆ, ಅದಕ್ಕೂ ಮೀರಿರಬೇಕು. ಗಂಡು-ಹೆಣ್ಣಿನ ಮಿಲನ ಸಹ ಪ್ರೀತಿಪೂರ್ವಕವಾಗಿರಬೇಕು. ಇಲ್ಲದಿದ್ದರೆ ಅದನ್ನು ಕಾಮವೆಂದು ಮಾತ್ರ ಹೇಳಬಹುದು. ಪಾಶ್ಚಾತ್ಯರಲ್ಲಿ ಕಂಡು ಬರುವ ಮುಕ್ತಕಾಮವನ್ನು ಸ್ವೇಚ್ಛಾಚಾರದ ಸಾಲಿಗೆ ಸೇರಿಸಬಹುದೇ ಹೊರತು ರಸಿಕತೆಯೆನ್ನಲಾಗದು. ಅಲ್ಲಿ ದೈಹಿಕ ತೀಟೆ ತೀರಿಸಿಕೊಳ್ಳುವ ಕ್ರಿಯೆಯಿದೆಯೇ ಹೊರತು ಪ್ರೀತಿಯ ಸೋಂಕು ಕಡಿಮೆ. ನಿಜರಸಿಕರಾಗೋಣ.
ತಾಯಿ-ಮಕ್ಕಳ ಪ್ರೀತಿ, ಮಕ್ಕಳನ್ನು ಮುದ್ದು ಮಾಡುವ ಹಿರಿಯರ ಪ್ರೀತಿ, ಮಕ್ಕಳು ದೊಡ್ಡವರನ್ನು ಪ್ರೀತಿಸುವ, ಗೌರವಿಸುವ ರೀತಿಯೂ ರಸಿಕತೆಯೇ! ನಾನು ಹೇಗಿದ್ದೇನೆ, ನನ್ನ ಆಕಾರ ಈಗ ಹೇಗಿದೆಯೆಂದು ನನಗೆ ಗೊತ್ತು. ಒಂದಾನೊಂದು ಕಾಲದಲ್ಲಿ ಸುಂದರನಾಗಿದ್ದೆನೇನೋ! ಆದರೂ ಈಗ ನನ್ನ ಮೊಮ್ಮಗಳು 'ಮೈ ತಾತಾ ಈಸ್ ವೆರಿ ವೆರಿ ವೆರಿ ಕ್ಯೂಟ್' ಅನ್ನುತ್ತಾಳೆ! ನಾನು ಅವಳನ್ನು ತುಂಬಾ ಹಚ್ಚಿಕೊಂಡಿದ್ದೇನೆ, ಮುದ್ದಿಸುತ್ತೇನೆ, ಪ್ರೀತಿಸುತ್ತೇನೆ, ಅದಕ್ಕೇ ಇರಬಹುದು. ರಸಿಕರಾಗೋಣ.
ನಿಜವಾದ ರಸಿಕರೆಂದರೆ ವಿರಾಗಿಗಳೇ! ಆಶ್ಚರ್ಯಪಡಬೇಡಿ. (ಕಪಟಿ ಸನ್ಯಾಸಿಗಳನ್ನು, ನಿತ್ಯಾನಂದರನ್ನು ನೆನಪಿಸಿಕೊಳ್ಳಬೇಡಿ!) ವಿರಾಗಿಗಳು, ಸನ್ಯಾಸಿಗಳು ಬಯಕೆಗಳನ್ನು, ಆಸೆಗಳನ್ನು ಬಿಟ್ಟವರು ಎಂದು ಹೇಳಲಾಗದು. ಅವರು ಸಾಮಾನ್ಯರು ಬಯಸುವಂತಹ ಸಂಗತಿಗಳು, ಆಸೆಗಳನ್ನು ಬಯಸುವವರಲ್ಲ. ಅವರದು ಅತ್ಯುನ್ನತ ಬಯಕೆ, ಆಸೆ. ಅವರು ಅತ್ಯುನ್ನತ ಬಯಕೆಯಾದ ತಮ್ಮನ್ನು ತಾವು ಅರಿಯುವ, ಆ ಮೂಲಕ ಪರಮಾತ್ಮನನ್ನು ಅರಿಯುವ ಹಾಗೂ ಅದರಿಂದ ಅತ್ಯುನ್ನತ ಆನಂದಸ್ಥಿತಿಯಾದ ಸಚ್ಚಿದಾನಂದಭಾವವನ್ನು ಹೊಂದುವ ಹೆಬ್ಬಯಕೆ ಹೊಂದಿದವರು. ಭಾವಸಮಾಧಿ ಅನ್ನುತ್ತಾರಲ್ಲಾ, ಅದು ರಸಿಕತೆಯ ಉತ್ಕಟ ಸ್ಥಿತಿ. ರಸಿಕರಾಗಲು ಪ್ರಯತ್ನಿಸೋಣ, ರಸಿಕರಾಗೋಣ!
*************
-ಕ.ವೆಂ.ನಾಗರಾಜ್.

`ರಸವೆಂದರೆ ಸಾರ, ರಸಿಕನೆಂದರೆ ರಸಾಸ್ವಾದ ಮಾಡುವವನು ಎಂದಷ್ಟೇ ಅರ್ಥ' ಎನ್ನುವುದನ್ನು ಅನೇಕ ಉದಾಹರಣೆಗೊ೦ದಿಗೆ ಉತ್ತಮವಾಗಿ ವಿವರಿಸಿದ್ದೀರಿ.ಈ ಬದುಕಿನ ಸಾರ-ಸತ್ವವನ್ನು, ಪ್ರಕೃತಿಯ ಅ೦ದ-ಚ೦ದ ಗಳನ್ನು ಆಸ್ವಾದಿಸಲು ಅವಶ್ಯವಾಗಿ ರಸಿಕರಾಗೋಣ! ನೀವು ಹಾಕಿರುವ ಭಾವಚಿತ್ರವೇ ಮೊಮ್ಮಗಳೊ೦ದಿಗಿನ ನಿಮ್ಮ ಅನುಬ೦ಧವನ್ನು ಸಾರುವ೦ತಿದೆ!ಉತ್ತಮ ಲೇಖನಕ್ಕಾಗಿ ಧನ್ಯವಾದಗಳು ಸರ್.
ಪ್ರತ್ಯುತ್ತರಅಳಿಸಿಮೆಚ್ಚುಗೆಯ ಪ್ರತಿಕ್ರಿಯೆ ಹಿತವಾಗಿದೆ. ಧನ್ಯವಾದಗಳು.
ಪ್ರತ್ಯುತ್ತರಅಳಿಸಿಗಡಿಬಿಡಿಯ ಜೀವನದಲ್ಲಿ , ಮನುಷ್ಯ ವಿಷಿಕನಾಗುತಿದ್ದಾನೆಯೆ ಹೊರತು ರಸಿಕನಲ್ಲ:) ನಿಮ್ಮ ಲೆಖನ ಅದರ ಒಂದು ಮುಖವನ್ನಾ ಪರಿಚಯ ಮಾಡಿಕೊಡ್ತು ಸರ್ ಧನ್ಯವಾದಗಳು:)
ಪ್ರತ್ಯುತ್ತರಅಳಿಸಿ:)
ಪ್ರತ್ಯುತ್ತರಅಳಿಸಿ