ನನ್ನ ಬಗ್ಗೆ

ನನ್ನ ಫೋಟೋ

ನಿವೃತ್ತ ತಹಸೀಲ್ದಾರ್, ಕೆಳದಿ ಕವಿಮನೆತನದ ಪತ್ರಿಕೆ 'ಕವಿಕಿರಣ'ದ ಸಂಪಾದಕ.
ನನ್ನ ಕೃತಿಗಳು: 1.ಕವಿಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿ ಚಿತ್ರಣ), 2. ಮೂಢ ಉವಾಚ - ಮುಕ್ತಕಗಳು, 3. ಆದರ್ಶದ ಬೆನ್ನು ಹತ್ತಿ . .
ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಸೆಪ್ಟೆಂಬರ್ 10, 2012

ಮೂಢ ಉವಾಚ - 89


ಭಕ್ತಿಯೆಂಬುದು ಪ್ರೀತಿ ಭಕ್ತಿಯೆಂಬುದು ರೀತಿ
ಬೇಕೆಂಬುದು ಭಕ್ತಿ ಬೇಡದಿಹುದೂ ಭಕ್ತಿ |
ರಾಗ ದ್ವೇಷಗಳೂ ಭಕ್ತಿ ನವರಸಗಳೂ ಭಕ್ತಿ
ನಿಜ ಭಾವಾಭಿವ್ಯಕ್ತಿ ಭಕ್ತಿ ಮೂಢ || ..೩೦೯

ತಿನಿಸ ಕಂಡೊಡನೆ ಹಸಿವು ಹಿಂಗುವುದೆ
ಜಠರಾಗ್ನಿ ತಣಿದೀತು ಸೇವಿಸಲು ತಾನೆ? |
ಅರಿವು ಇದ್ದೊಡನೆ ಪರಮಾತ್ಮ ಸಿಕ್ಕಾನೆ
ಅನುಭವಿಸಿ ಕಾಣಬೇಕವನ ಮೂಢ || ..೩೧೦

ದುರ್ಜನರ ಸಂಗವದು ರಾಗದ್ವೇಷಕೆ ದಾರಿ
ಒಳಕರೆಗೆ ಕಿವುಡಾಗಿ ಬೀಳುವರು ಜಾರಿ |
ಕುಜನರಿಂ ದೂರಾಗಿ ಸುಜನರೊಡನಾಡೆ
ಮೇಲೇರುವ ದಾರಿ ಕಂಡೀತು ಮೂಢ || .೩೧೧

ದೇವನನು ಮೆಚ್ಚಿಸಲು ನಾಮ ಪಟ್ಟೆಗಳೇಕೆ
ರುದ್ರಾಕ್ಷಿ ಸರವೇಕೆ ಜಪಮಣಿಯು ಬೇಕೆ |
ತೋರಿಕೆಯ ನಡೆ ಸಲ್ಲ ನುಡಿಯು ಬೇಕಿಲ್ಲ
ಅಂತರಂಗದ ಭಾವ ಸಾಕೆಲ್ಲ ಮೂಢ || ..೩೧೨
****************
-ಕ.ವೆಂ.ನಾಗರಾಜ್.

2 ಕಾಮೆಂಟ್‌ಗಳು:

 1. ಅರಿವು ಇದ್ದೊಡನೆ ಪರಮಾತ್ಮ ಸಿಕ್ಕಾನೆ
  ಅನುಭವಿಸಿ ಕಾಣಬೇಕವನ ಮೂಢ ||

  ಒಳಕರೆಗೆ ಕಿವುಡಾಗಿ ಬೀಳುವರು ಜಾರಿ |

  ಅಂತರಂಗದ ಭಾವ ಸಾಕೆಲ್ಲ ಮೂಢ

  ಈ ಮೇಲಿನ ನಿಮ್ಮ ಸಾಲುಗಳು ಅತ್ಯದ್ಭುತ. ಜ್ಞಾನದ ಅಂತರಂಗದಿಂದ ಮೂಡಿ ಬಂದ ನುಡಿಗಳು.
  ನಾಗರಾಜ್ ನಿಮಗೆ ನೀವೇ ಸಾಟಿ.
  ನೀವು ನಿಮ್ಮ ನುಡಿಗಳ ಸಂಗ್ರಹವನ್ನು ಪ್ರಕಟಿಸುತ್ತೀರಾ?

  ಪ್ರತ್ಯುತ್ತರಅಳಿಸಿ
 2. ಸುಮಾರು 2 ವರ್ಷಗಳ ಹಿಂದೆ 250 ಉವಾಚಗಳ ಒಂದು ಸಂಗ್ರಹ ಪ್ರಕಟಿಸಿರುವೆ. ಧನ್ಯವಾದಗಳು, ರವಿಯವರೇ.

  ಪ್ರತ್ಯುತ್ತರಅಳಿಸಿ