ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ನವೆಂಬರ್ 12, 2012

ಛತ್ರಪತಿ ಶಿವಾಜಿಯ ತಂದೆಯ ಸಮಾಧಿಗೆ ಸ್ಥಳ ಒದಗಿಸಿದವರು ಕೆಳದಿಯರಸರು



     ಶಿವಾಜಿಯ ತಂದೆ ಶಹಾಜಿ ಭೋಸ್ಲೆ ಕರ್ನಾಟಕದ ಹೋದಿಗ್ಗೆರೆ (ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ) ಅರಣ್ಯದಲ್ಲಿ ಬೇಟೆಯಾಡುವ ಸಂದರ್ಭದಲ್ಲಿ ಕುದುರೆಯಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ೧೬೬೫ರಲ್ಲಿ ಮೃತನಾದಾಗ ಆತನ ದೇಹವನ್ನು ಹೋದಿಗ್ಗೆರೆಯಲ್ಲೇ ಸಮಾಧಿ ಮಾಡಲಾಯಿತು. ಆಗ ಹೋದಿಗ್ಗೆರೆ ಕೆಳದಿಯ ರಾಜ್ಯದ ಸೀಮೆಯಲ್ಲೇ ಬರುತ್ತಿದ್ದು, ಶಹಾಜಿಯನ್ನು ಆ ಗ್ರಾಮದಲ್ಲೇ ಸಮಾಧಿ ಮಾಡಲು ಅವಕಾಶ ಕೊಟ್ಟದ್ದು ಕೆಳದಿಯ ಅರಸರೇ. ಸಮಾಧಿ ಮಾಡಲು ಅವಕಾಶ ಕೊಡಬೇಕೇ, ಬೇಡವೇ ಎಂಬ ಬಗ್ಗೆ ದೀರ್ಘವಾದ ಮಂತ್ರಾಲೋಚನೆ ನಡೆದು, ಕೊನೆಗೆ ಶಹಾಜಿ ಮರಣ ಹೊಂದಿದ ಸ್ಥಳದಲ್ಲೇ ಸಮಾಧಿಯನ್ನು ಗೌರವೋಚಿತವಾಗಿ ನಿರ್ಮಿಸಲಾಯಿತೆಂದು ಹೇಳಲಾಗಿದೆ. ಈ ಸಮಾಧಿಯನ್ನು ಕರ್ನಾಟಕ ಸರ್ಕಾರವು ಸಂರಕ್ಷಿತ ಸ್ಮಾರಕವೆಂದು ಘೋಷಿಸಿದೆ. ಶಿವಾಜಿಯ ಅನುಯಾಯಿಗಳೆಂದು ಹೇಳಿಕೊಂಡು ಮರಾಠಿ ಭಾಷೆಯನ್ನು ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿರುವವರು ಈ ವಿಷಯವನ್ನು ಗಮನಿಸಬೇಕು. ಸ್ವಭಾಷಾಪ್ರೇಮ ಒಳ್ಳೆಯದು. ಆದರೆ ಅದು ಪರಭಾಷಾ ದ್ವೇಷವಾಗಿ ಬೆಳೆಯಬಾರದು, ಬೆಳೆಸಬಾರದು. ಒಂದು ಭಾಷೆ ಬೆಳೆಯುವುದು, ಅಳಿಯುವುದು ಅದನ್ನು ಬಳಸುವ ರೀತಿಯಿಂದ. ಅನ್ಯ ಭಾಷಿಗರೊಡನೆ ಹೋರಾಡುವುದರಿಂದ, ಕಚ್ಚಾಡುವುದರಿಂದ ಅಲ್ಲ.
-ಕ.ವೆಂ.ನಾಗರಾಜ್.
**********
[ಶಹಾಜಿಯ ಚಿತ್ರವನ್ನು ಅಂತರ್ಜಾಲದಿಂದ ಹೆಕ್ಕಿದೆ.]

6 ಕಾಮೆಂಟ್‌ಗಳು:

  1. ಆತ್ಮೀಯ ನಾಗರಾಜರೆ,
    ಒಳ್ಳೆಯ ಸಂದೇಶ. "ಒಂದು ಭಾಷೆ ಬೆಳೆಯುವುದು, ಅಳಿಯುವುದು ಅದನ್ನು ಬಳಸುವ ರೀತಿಯಿಂದ. ಅನ್ಯ ಭಾಷಿಗರೊಡನೆ ಹೋರಾಡುವುದರಿಂದ, ಕಚ್ಚಾಡುವುದರಿಂದ ಅಲ್ಲ."
    ಉತ್ತಮ ವಿಚಾರಕ್ಕಾಗಿ ಧನ್ಯವಾದಗಳು

    ಪ್ರತ್ಯುತ್ತರಅಳಿಸಿ
  2. Dear Nagaraj sir, If this message is followed in principle and in good spirits, then there will be no world wars at all..!! All are fighting but they do not know what they want??

    gopi

    ಪ್ರತ್ಯುತ್ತರಅಳಿಸಿ
  3. ನಿಮ್ಮ ಮಾತು ನೂರಕ್ಕೆ ನೂರು ನಿಜ, ಗೋಪಿಯವರೇ. ಪ್ರತಿಕ್ರಿಯೆಗೆ ವಂದನೆಗಳು.

    ಪ್ರತ್ಯುತ್ತರಅಳಿಸಿ