ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ
ಚಿತ್ರ ಲೇಖನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಚಿತ್ರ ಲೇಖನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಜೂನ್ 1, 2011

171ನೆಯ ಮನೆಮನೆಕವಿಗೋಷ್ಠಿ

     ಹಾಸನದಲ್ಲಿ ಒಂದು ವಿಶಿಷ್ಟ ಪ್ರಯೋಗ - ಮನೆಮನೆಗಳಲ್ಲಿ ಕವಿಗೋಷ್ಠಿ- ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ದಿನಾಂಕ 09-01-2011ರಂದು 171ನೆಯ ಮನೆಮನೆಕವಿಗೋಷ್ಠಿ ನನ್ನ ಮನೆಯಲ್ಲಿ ಆಯೋಜಿತವಾಗಿತ್ತು. ಹಲವಾರು ಕವಿಗಳು ಭಾಗವಹಿಸಿ ಸ್ವರಚಿತ ಕೃತಿಗಳನ್ನು ವಾಚಿಸಿದರು. ಡಾ. ಜಯಚಂದ್ರಗುಪ್ತರರ ಕೃತಿ 'ಚುಚ್ಚುಮದ್ದು' ಅನ್ನು ಅಂದು ವಿಮರ್ಶಿಸಿ, ಚರ್ಚಿಸಲಾಯಿತು. ಅಂದಿನ ಕೆಲವು ದೃಶ್ಯಗಳು ಇಲ್ಲಿವೆ:







ಶನಿವಾರ, ಮೇ 8, 2010

ಪಿಕಳಾರನ ಸಂಸಾರ

ಹಕ್ಕಿಯೊಂದು ಹಾರಿ ಬಂದು ಕಿಟಕಿಯಲ್ಲಿ ಕುಳಿತಿತು
ಸುತ್ತಮುತ್ತ ಹಾರಿತು ಅತ್ತ ಇತ್ತ ನೋಡಿತು |
ಸರಿಯೆಂದು ಕಂಡಿತು ಗೂಡನೊಂದು ಕಟ್ಟಿತು
ಕಾಲ ಕೂಡಿ ಬಂದಿತು ಮೊಟ್ಟೆ ಮೂರು ಇಟ್ಟಿತು ||

ಹಕ್ಕಿಗಾಗಿ ಕೋಣೆ ತೆರವು ಮನೆಮಂದಿಯಲ್ಲ ನೆರವು
ತಾಯಿಗಿಲ್ಲ ತಲೆಭಾರ ಜೀವಸೆಲೆಗೆ ಉಪಕಾರ |
ಬಿಟ್ಟ ಬಾಣದಂತೆ ಹಾರಿ ಬಂದವರನು ಹೆದರಿಸಿತು
ಕಾವಲಿದ್ದು ಕಾವು ಕೊಟ್ಟು ತಾಯಿತನವ ಮೆರೆಯಿತು ||

ಮೊಟ್ಟೆ ಬಿರಿದು ಬೊಮ್ಮಟೆಗಳು ಬಂದವು
ತ್ರಾಣವಿಲ್ಲ ಕಾಣದೆಲ್ಲ ಕಿಚಿಪಿಚಿ ಕದಲಿದವು |
ನಾವು ತಾಳಲಾರೆವು ಅಮ್ಮ ಹಸಿವೆ ಅಮ್ಮ ಹಸಿವೆ
ಬಂದೆ ತಡಿ ಇಗೋ ಹಿಡಿ ಪ್ರೀತಿ ಎಲ್ಲ ಸುರಿವೆ ||

ಹಾ ಸರಿ ಹೀಗೆ ಮರಿ ಎಲ್ಲಿ ಹಾರು ನೋಡುವ
ಹಾರುವುದ ಕಲಿತ ಮೇಲೆ ಭರ್ ಎಂದು ಹಾರುವ |
ನಿಮ್ಮ ನೆರವು ನಮ್ಮ ನಲಿವು ಎನಿತು ಮಧುರ ಸಂಬಂಧ
ದ್ವೇಷ ಬಿಡಿ ಪ್ರೀತಿಸಿರಿ ಅನಿತು ಬಾಳು ಚೆಂದ ||
****************
-ಕ.ವೆಂ. ನಾಗರಾಜ್.
(ಆಧಾರ: ಶಿವಮೊಗ್ಗದ ದಿನಪತ್ರಿಕೆ 'ಜನಹೋರಾಟ'ದಲ್ಲಿ ಪ್ರಕಟವಾದ ಕವಿ ಸುರೇಶರ 'ಒಂದು ಗೂಡಿನ ಕಥೆ' ಎಂಬ ಸಚಿತ್ರ ಲೇಖನ;                                                                                                      ಚಿತ್ರಗಳು: ಬಿ.ಎಸ್.ಆರ್. ದೀಪಕ್.)